ಉಜಿರೆ ಎಸ್.ಡಿ.ಎಂ ಎಜ್ಯುಕೇಶನ್ ಸೊಸೈಟಿ ಕಾಯ೯ದಶಿ೯ ಡಾ. ಯಶೋವಮ೯ ವಿಧಿವಶ

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಎಜ್ಯುಕೇಶನ್ ಸೊಸೈಟಿ ಕಾಯ೯ದಶಿ೯ ಡಾ. ಯಶೋವಮ೯ ಅವರು ಮೇ.22ರ ರಾತ್ರಿ ಸಿಂಗಪೂರ್ ನಲ್ಲಿ ನಿಧನರಾದರು.
ಅನಾರೋಗ್ಯದಿಂದ ‌ಸಿಂಗಪೂರ್ ನಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ಧ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ಬಿ ಯಶೋವರ್ಮರವರು ಸಿಂಗಾಪುರಕ್ಕೆ ಚಿಕಿತ್ಸೆಗಾಗಿ ಹೋಗಿದ್ದರು. ಮೇ.22ರಂದು ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನ ಹೊಂದಿದ್ದಾರೆ.

ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಚಾರ್ಯರಾಗಿ‌ ಹಲವು ವಷ೯ ಅವರು ಸೇವೆ ಸಲ್ಲಿಸಿದ್ದರು. ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರಾಗಿ, ಹಲವಾರು ಸಮ್ಮೇಳನ ಗಳನ್ನು ನಡೆಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಬಂಧು‌ ವಗ೯, ಕುಟುಂಬಸ್ಥರನ್ನು ಅಗಲಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಧರ್ಮ ಪತ್ನಿ ಡಾ.ಹೇಮಾವತಿ ಹೆಗ್ಗಡೆಯವರ ಸಹೋದರ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.