ಬೆಳ್ತಂಗಡಿ : ಮೇ 22ರಂದು ಸಿಂಗಾಪೂರದಲ್ಲಿ ವಿಧಿವಶರಾದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಬಿ.ಯಶೋವರ್ಮರವರ ಪಾರ್ಥಿವ ಶರೀರದ ಬಗ್ಗೆ ಕಾನೂನು ಪ್ರಕ್ರಿಯೆ ಮೇ.23 ಮಧ್ಯಾಹ್ನ ಮುಗಿಸಿದ್ದು ರಾತ್ರಿ 12 ಗಂಟೆಗೆ ಸಿಂಗಾಪುರದಿಂದ ಇಂಡಿಗೋ ವಿಮಾನದಲ್ಲಿ ಹೊರಟು ಮೇ 24 ರಂದು ಬೆಳಗ್ಗೆ 7.30 ಗಂಟೆಗೆ ಪಾರ್ಥಿವ ಶರೀರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಯಿತು.
ಎಸ್ ಡಿ ಎಂ ಹಿರಿಯ ವಿದ್ಯಾರ್ಥಿಗಳು ಮಾಲಾರ್ಪಣೆಯನ್ನು ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘ ಬೆಂಗಳೂರು ಇದರ ಪದಾಧಿಕಾರಿಗಳು, ಯಶೋವರ್ಮರ ಅಭಿಮಾನಿಗಳು ಹಾಗೂ ಕುಟುಂಬ ವರ್ಗದವರು ಭಾಗಿಯಾಗಿದ್ದರು.