ಕಲ್ಮಂಜ: ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮುಂದಿನ ವರ್ಷ ನಡೆಸಲು ಉದ್ದೇಶಿಸಿರುವ ಬ್ರಹ್ಮಕಲಶೋತ್ಸವದ ಕುರಿತು ಶಾಸಕರ ನೇತೃತ್ವದಲ್ಲಿ ಸಭೆಯು ಮೇ 23 ರಂದು ಜರಗಿತು.
ಶಾಸಕ ಹರೀಶ್ ಪೂಂಜ ಮಾತನಾಡಿ ಬ್ರಹ್ಮಕಲಶೋತ್ಸವದ ಪೂರ್ವಸಿದ್ಧತೆ,ವಿವಿಧ ಸಮಿತಿಗಳ ರಚನೆ ಕುರಿತು ಮಾಹಿತಿ ನೀಡಿ, ಬ್ರಹ್ಮಕಲಶೋತ್ಸವಕ್ಕೆ ಮೊದಲು ದೇವಸ್ಥಾನಕ್ಕೆ ಬರುವ ರಸ್ತೆಯನ್ನು ಅಭಿವೃದ್ಧಿಗೊಳಿಸುವ ಕುರಿತು ಮತ್ತು ದೇವಸ್ಥಾನದ ಸಮೀಪ ನಿರ್ಮಾಣಗೊಂಡಿರುವ 5 ಕೋಟಿ ರೂ. ವೆಚ್ಚದ ಸೇತುವೆ ಸಹಿತ ಕಿಂಡಿ ಅಣೆಕಟ್ಟಿನ ಕಾಮಗಾರಿ ಪೂರ್ಣಗೊಂಡಿದ್ದು ಇದೀಗ ಪ್ರಾಯೋಗಿಕವಾಗಿ ನೀರನ್ನು ಸಂಗ್ರಹಿಸಲಾಗಿದೆ. ಮುಂದಿನ ಕೆಲವೇ ದಿನಗಳಲ್ಲಿ ಕಿಂಡಿ ಅಣೆಕಟ್ಟು ಹಾಗೂ ಸೇತುವೆಯನ್ನು ಲೋಕಾರ್ಪಣೆ ಗೊಳಿಸಲಾಗುವುದು ಎಂದು ಹೇಳಿದರು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ,ಗ್ರಾ.ಪಂ. ಅಧ್ಯಕ್ಷ ಶ್ರೀಧರ ನಿಡಿಗಲ್ ಉಪಸ್ಥಿತರಿದ್ದರು.
ಮಂಜುನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.