ಬೆಳ್ತಂಗಡಿ: ಬೆಳ್ತಂಗಡಿ ನಗರ ಪಂಚಾಯತದ ಸಾಮಾನ್ಯ ಸಭೆ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಅವರ ಅಧ್ಯಕ್ಷತೆಯಲ್ಲಿ ಮೇ 26 ರಂದು ನ.ಪಂ ಸಭಾಭವನದಲ್ಲಿ ಜರುಗಿತು.
ಸ್ಥಾಯಿ ಸಮಿತಿ ಅಧ್ಯಕ್ಷ ಲೋಕೇಶ್ ನಾಯ್ಕ, ಮುಖ್ಯಾಧಿಕಾರಿ ಸುಧಾಕರ್, ಇಂಜಿನಿಯರ್ ಮಹಾವೀರ ಆರಿಗ, ನ.ಪಂ ಸದಸ್ಯರು, ನಾಮನಿರ್ದೇಶನ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಆರೋಗ್ಯ ನಿರೀಕ್ಷಕ ಗಿರೀಶ್ ಆರೋಗ್ಯ ಮಾಹಿತಿ ನೀಡಿ ಪಟ್ಟಣ ಪಂಚಾಯತು ವ್ಯಾಪ್ತಿಯಲ್ಲಿ ಒಂದು ಡೆಂಗ್ಯು ಪ್ರಕರಣ ಪತ್ತೆಯಾಗಿದ್ದು ಆರೋಗ್ಯ ಇಲಾಖೆಯಿಂದ ಸೂಕ್ತ ಮುಂಜಾಗ್ರತೆ ಕೈಗೊಂಡಿರುವುದಾಗಿ ತಿಳಿಸಿದರು.
ಮೆಸ್ಕಾಂ ಇಲಾಖೆಯ ಇಂಜಿನಿಯರ್ ಅವರು ತಮ್ಮ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ಬೆಳಕು ಯೋಜನೆಯಲ್ಲಿ ನಗರದಲ್ಲಿ 13 ಅರ್ಜಿ ಬಂದಿದ್ದು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.