ಉಳ್ಳಾಲದಿಂದ ಯುವಕನೋರ್ವನನ್ನು ಅಪಹರಿಸಿದ ಕಿಡಿಗೇಡಿಗಳು: ಚಾರ್ಮಾಡಿ ಘಾಟ್ ನಲ್ಲಿ ಕೊಲೆಗೆ ಯತ್ನ

ಚಾರ್ಮಾಡಿ: ಉಳ್ಳಾಲದಿಂದ ಯುವಕನೋರ್ವನನ್ನು ಅಪಹರಿಸಿ ತಂದು ಚಾರ್ಮಾಡಿ ಘಾಟ್ ನಲ್ಲಿ ಕೊಲೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.

ಉಳ್ಳಾಲ ದರ್ಗಾ ಬಳಿಯ ಕಬೀರ್(26) ಎಂಬಾತ ಕೋಟೆಪುರ ಸಮೀಪ ಸಹೋದರನನ್ನು ಬಿಟ್ಟು ಮನೆಯತ್ತ ಹಿಂತಿರುಗುತ್ತಿದ್ದಾಗ ಆತನ ಬೈಕಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ನೆಲಕ್ಕುರುಳಿದ ಕಬೀರ್ ನನ್ನು ಕಾರಿನಿಂದ ಇಳಿದ ತಂಡ ಹಿಡಿಯಲು ಯತ್ನಿಸಿದಾಗ ಕಬೀರ್ ಓಡಲು ಯತ್ನಿಸಿದ್ದಾರೆ ಆದರೆ ಆತನನ್ನು ಓಡದಂತೆ ತಡೆದು ತಲವಾರಿನ ಹಿಂಭಾಗದಿಂದ ತಲೆಯ ಹಿಂಭಾಗಕ್ಕೆ ಬಡಿದು ಬಳಿಕ ಕಾರೊಳಗಡೆ ಹಾಕಿ ಅಪಹರಿಸಿ, ಚಾರ್ಮಾಡಿ ಘಾಟ್ ಸಮೀಪ ಕಾರು ನಿಲ್ಲಿಸಿ ತಂಡ ಡ್ರಾಗರ್ ಮೂಲಕ ಕುತ್ತಿಗೆಗೆ ಇರಿಯಲು ಯತ್ನಿಸುತ್ತಿದ್ದಂತೆ ಆತನ ಕುತ್ತಿಗೆ ಹಿಡಿದ ಕಬೀರ್ ಕಾರಿನಿಂದ ಹೊರಗಿಳಿದು ತಪ್ಪಿಸಿಕೊಂಡಿದ್ದಾರೆ.

ಕಿಡಿಗೇಡಿಗಳ ಮೊಬೈಲಿಗೆ ಬಂದ ಕರೆಯಲ್ಲಿ ಕಬೀರ್ ನನ್ನು ಹತ್ಯೆ ನಡೆಸಿ ಘಾಟಿ ಬಾಗದಲ್ಲಿ ಯಾರಿಗೂ ಹೆಣ ಸಿಗದಂತೆ ಬಿಸಾಡಿರಿ ಎನ್ನುವ ಸೂಚನೆಯನ್ನು ನೀಡುತ್ತಲೇ ಇದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.