ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಅಹ್ವಾನ

ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಜೂ.30 ರಂದು ಕೊನೆಯ ದಿನಾಂಕವಾಗಿದೆ.

ಇಲಾಖೆಯ ವೆಬ್ ಸೈಟ್‌ www.bcwd.karnataka.gov.in ನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ www.bcwd.karnataka.gov.in  ನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected]  ಇಮೇಲ್ ಮುಖಾಂತರ ಅಥವಾ ಜಿಲ್ಲಾ/ ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 080 8050370006

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.