ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶಾಲಾ ಸಭಾಭವನದಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಸಂಸ್ಥೆಯ ಪ್ರಾಂಶುಪಾಲರಾದ ವಂ.ಫಾ| ವಿಜಯ್ ಲೋಬೋರವರು ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವೈದ್ಯರುಗಳಾದ ಡಾ.ನಿಖಿಲ್ ಹಾಗೂ ಡಾ.ರೋಹನ್ ಹಾಗೂ ರವಿ ಕುಮಾರ್ ರವರ ಜೊತೆಗೂಡಿ ದೀಪಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಹಾಗೂ ಯೋಗದಿನಾಚರಣೆಗೆ ಶುಭವನ್ನು ಕೋರಿದರು. ಕುಮಾರಿ ಸಚಿ ಹಾಗೂ ಸುಶ್ಮಿತಾರವರ ಮಾರ್ಗದರ್ಶನದಲ್ಲಿ ಯೋಗ ಪ್ರಾತ್ಯಕ್ಷಿಕೆ ನಡೆಯಿತು. ಹಿರಿಯ ಶಿಕ್ಷಕ ಪ್ರಭಾಕರ ಶೆಟ್ಟಿಯವರು ಸ್ವಾಗತಿಸಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.