ಗುಲಾಬಿ ಕೃಷ್ಣ ಭಂಡಾರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಧರ್ಮಾರ್ಥ ಕನ್ನಡಕಗಳ ವಿತರಣಾ ಕಾರ್ಯಕ್ರಮ

ಗುರುವಾಯನಕೆರೆ: ಉಚಿತ ಆರೋಗ್ಯ ತಪಾಸಣಾ ಶಿಬಿರದ ಆಯ್ದ ಕಣ್ಣಿನ ಪರಿಕ್ಷಾರ್ಥಿಗಳಿಗೆ ಧರ್ಮಾರ್ಥ ಕನ್ನಡಕಗಳ ವಿತರಣಾ ಕಾರ್ಯಕ್ರಮ ಜೂ.22 ರಂದು ಗುರುವಾಯನಕೆರೆ ನವಶಕ್ತಿ ರೆಸಿಡೆನ್ಸಿಯಲ್ಲಿ ಜರುಗಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ  ಆಗಮಿಸಿದ ಉದ್ಯಮಿ,ತುಳು ಸಂಘ ಬರೋಡ ಅಧ್ಯಕ್ಷ ಶಶಿಧರ್ ಶೆಟ್ಟಿ ಮಾತನಾಡಿ ಒಬ್ಬ ವ್ಯಕ್ತಿ ಬೆಳೆದು ದೊಡ್ಡವನಾಗಿ ಸಮಾಜದಲ್ಲಿ ಉನ್ನತ ಮಟ್ಟಕ್ಕೇರಲು ತಾಯಿ ಎಂಬ ಶಕ್ತಿಯ ನಿಸ್ವಾರ್ಥ ತ್ಯಾಗ ಇರುತ್ತದೆ ಆದ್ದರಿಂದ ತಾಯಿಯ ಋಣವನ್ನು ಯಾರಿಂದಲೂ ತೀರಿಸಲು ಸಾಧ್ಯವಿಲ್ಲ. ತಾಯಿಯ ಹೆಸರು ಸಮಾಜದಲ್ಲಿ ಸದಾ ನೆನಪಾಗಿ ಉಳಿಯಬೇಕು ಅವರ ಹೆಸರಿನಲ್ಲಿ ಅಶಕ್ತ ಕುಟುಂಬಗಳಿಗೆ ನೆರವಾಗಬೇಕು ಎಂಬ ನಿಟ್ಟಿನಲ್ಲಿ ತಾಯಿಯ ಸ್ಮರಣಾರ್ಥ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿ  ಆ ಮೂಲಕ ಸಾಮಾಜಿಕ ಸೇವೆಗಳನ್ನು ಮಾಡುತ್ತಿರುವ ಗುಲಾಬಿ ಕೃಷ್ಣ ಬಂಡಾರಿ ಚಾರಿಟೇಬಲ್ ಟ್ರಸ್ಟ್  ಕಾರ್ಯ ಶ್ಲಾಘನಿಯ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಾಲಿವುಡ್ ಚಿತ್ರ ನಿರ್ದೇಶಕ, ನಿರ್ಮಾಪಕ ಪದ್ಮಶ್ರೀ ಡಾ.ಮಧುರ್ ಭಂಡಾರ್ಕರ್, ಭಂಡಾರಿ ಮಹಾಮಂಡಲದ ಸ್ಥಾಪಕಾಧ್ಯಕ್ಷ ಕಡಂದಲೆ ಸುರೆಶ್ ಭಂಡಾರಿ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಬಿ ಶಿರ್ಲಾಲು, ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ್, ಡಾ.ಶಿವರಾಮ ಕೃಷ್ಣ ಭಂಡಾರಿ ಸಂಸ್ಥಾಪಕ, ಅಧ್ಯಕ್ಷರು ಗುಲಾಬಿ ಕೃಷ್ಣ ಭಂಡಾರಿ ಚಾರಿಟೇಬಲ್ ಟ್ರಸ್ಟ್ ಉಪಸ್ಥಿತರಿದ್ದರು.

ಪತ್ರಕರ್ತ ರೋನ್ಸ್ ಬಂಟ್ವಾಳ ಸ್ವಾಗತಿಸಿ, ಆರಿಫ್ ಕಲ್ಲಕಟ್ಟ ವಂದಿಸಿದರು.

ಆಯ್ದ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಿಸಲಾಯಿತು.

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.