ಗುರುವಾಯನಕೆರೆ: ಎಸ್.ಸಿ ಮೋರ್ಚಾ ಬಂಧುಗಳ ಸಮಾವೇಶ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಗುರುವಾಯನಕೆರೆ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ಎಸ್.ಸಿ ಮೋರ್ಚಾ, ಬೆಳ್ತಂಗಡಿ ಮಂಡಲ ವತಿಯಿಂದ ಮೋದಿಯವರ 8ನೇ ವರ್ಷದ ಸಮರ್ಥ ಆಡಳಿತದ ಸಂಭ್ರಮಾಚರಣೆಯ ಪ್ರಯುಕ್ತ ಎಸ್.ಸಿ ಮೋರ್ಚಾ ಬಂಧುಗಳ ಸಮಾವೇಶ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜೂ.25 ರಂದು ಗುರುವಾಯನಕೆರೆ  ಕಿನ್ಯಮ್ಮ ಯಾನೆ ಗುಣವತಿ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಸಚಿವ,  ಕೊಳ್ಳೆಗಾಳದ ಶಾಸಕ ಮಹೇಶ್ ರವರು ನೆರವೇರಿಸಿದರು.

ಅಧ್ಯಕ್ಷತೆಯನ್ನು ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ವಹಿಸಿದ್ದರು.

ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್   ಶಾಸಕ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಮಾಜಿ ಶಾಸಕ ಪ್ರಭಾಕರ ಬಂಗೇರ, ಎಸ್ ಸಿ ಮೋರ್ಚಾದ ತಾಲೂಕು ಅಧ್ಯಕ್ಷ ಗೋಪಾಲಕೃಷ್ಣ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀನಿವಾಸ ರಾವ್, ಗಣೇಶ್ ಗೌಡ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.