ಧರ್ಮಸ್ಥಳ : ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ 2022 -23 ನೇ ಸಾಲಿನ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಜೂ.25 ರಂದು ನಡೆಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸೋಮಶೇಖರ ಶೆಟ್ಟಿ ಉದ್ಘಾಟಿಸಿ, ಸಂಘಗಳ ವಾರ್ಷಿಕ ಕಾರ್ಯಯೋಜನೆಯ ಕಿರುಹೊತ್ತಿಗೆಗಳನ್ನು ಅನಾವರಣಗೊಳಿಸಿದರು. ವಿದ್ಯಾರ್ಥಿಗಳು ಸೃಜನಾತ್ಮಕವಾಗಿ ಹಾಗೂ ಭಾವನಾತ್ಮಕವಾಗಿ ಬೆಳೆಯಲು ಈ ವಿವಿಧ ಸಂಘಗಳು ಸುಂದರ ವೇದಿಕೆಯಾಗಲಿ ಎಂದು ಆಶಯ ವ್ಯಕ್ತಪಡಿಸಿದರು. ಶಾಲಾ ಮುಖ್ಯೋಪಾಧ್ಯಾಯ ಧನ್ಯ ಕುಮಾರ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ವಿವಿಧ ಸಂಘಗಳ ವಿದ್ಯಾರ್ಥಿ ಪದಾಧಿಕಾರಿಗಳು ವಾರ್ಷಿಕ ಕಾರ್ಯ ಯೋಜನೆ ವರದಿಯನ್ನು ಮಂಡಿಸಿದರು. ಶಿಕ್ಷಕ ವಿಕಾಸ್ ಆರಿಗರು ಧನ್ಯವಾದವಿತ್ತರು. ಶಿಕ್ಷಕ ಯುವರಾಜರವರು ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ಅಧ್ಯಾಪಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.