ಮಳೆ ಹಾಗೂ ಪ್ರಾಕೃತಿಕ ವಿಕೋಪ-ತುರ್ತು ಸೇವೆಗೆ ಸಹಾಯವಾಣಿ: ಜು.4 ರಿಂದ 7ರವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್

ಬೆಳ್ತಂಗಡಿ: ಮಳೆಯಿಂದ ಸಮಸ್ಯೆ ಮತ್ತು ಪ್ರಾಕೃತಿಕ ವಿಕೋಪದಂತಹ ಯಾವುದೇ ಸಮಸ್ಯೆ ಎದುರಾದರೆ ತುರ್ತು ಸೇವೆಗೆ ಜಿಲ್ಲಾ ಆಡಳಿತ ಟೋಲ್ ಫ್ರೀ ಸಂಖ್ಯೆ 1077 ಅಥವಾ ದೂರವಾಣಿ 0824-2442590 ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

  • ನೀರು ನಿಂತಿರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರದಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗೃತೆ ವಹಿಸಬೇಕು.
  • ಮೀನುಗಾರರು ಸಮುದ್ರಕ್ಕೆ ಇಳಿಯಬಾರದು.
  • ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ನಿರ್ವಹಿಸಬೇಕು ಎಂದು ಅವರು ಸೂಚಿಸಿದ್ದಾರೆ.
  • ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರತೆರೆದು, ಅವುಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಎಂದು ಅವರು ನಿರ್ದೇಶನ ನೀಡಿದ್ದಾರೆ.
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.