ಉಜಿರೆ: ಅನುಗ್ರಹ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ಉಜಿರೆ: ಉಜಿರೆ ವಿದ್ಯಾರ್ಥಿ ಸಂಘ ಹಾಗೂ ವಿವಿಧ ವಿದ್ಯಾರ್ಥಿ ಸಂಘಟನೆಗಳ ಉದ್ಘಾಟನೆಯು ಜು.2 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನುಗ್ರಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆವರೆಂಡ್ ಫಾ| ಜೇಮ್ಸ್ ಡಿಸೋಜಾ ವಹಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಒಂದನೆಯ ಫಾ| ವಿಜಯ್ ಲೋಬೋ ಪ್ರತಿಜ್ಞಾವಿಧಿ ಬೋಧಿಸಿದರು.
ಪುಂಜಾಲಕಟ್ಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ವಿಶಾಲ್ ಪಿಂಟೋ ಮುಖ್ಯ ಅತಿಥಿಗಳಾಗಿ, ಶಿಕ್ಷಣ ಕ್ಷೇತ್ರದಲ್ಲಿ ಭಾರತದ ಕೊಡುಗೆ, ಶಿಕ್ಷಣದಲ್ಲಿ ಮೌಲ್ಯಗಳ ಅಳವಡಿಕೆ, ಶಿಕ್ಷಣ ಮತ್ತು ಜ್ಞಾನದ ನಡುವಿನ ವ್ಯತ್ಯಾಸದ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳು ಜೀವನದಲ್ಲಿ ಆತ್ಮಸ್ಥೈರ್ಯವನ್ನು ಹೊಂದಿರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾಲೇಜು ವಿದ್ಯಾರ್ಥಿ ಸಂಘದ ನಾಯಕ ಕ್ಲಿಟರ್ಸ್ ಪ್ರಜ್ವಲ್ ಸ್ವಾಗತಿಸಿ, ವಿದ್ಯಾರ್ಥಿನಿ೦ದ ಪ್ರತಿಮಾಲೋಕ ನಿರೂಪಿಸಿ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅತುಲ್ಯ ಸಾಬು ಧನ್ಯವಾದವಿತ್ತರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.