ಜು.7: ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ಇದರ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.7ರಂದು ಕಾಶಿಬೆಟ್ಟು ಅರಳಿ ರಸ್ತೆಯಲ್ಲಿರುವ ರೋಟರಿ ಸೇವಾ ಭವನದಲ್ಲಿ ಜರುಗಲಿದೆ ಎಂದು ಕ್ಲಬ್ ನ ಅಧ್ಯಕ್ಷ ರೋ ಶರತ್ ಕೃಷ್ಣ ಪಡ್ವೆಟ್ನಾಯ ಮತ್ತು ನಿಯೋಜಿತ ಅಧ್ಯಕ್ಷೆ ರೋ ಮನೋರಮ ಭಟ್ ತಿಳಿಸಿದರು.

ಅವರು ಜು.5 ರಂದು ರೋಟರಿ ಸೇವಾ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

51 ವರ್ಷಗಳ ಇತಿಹಾಸವಿರುವ ಬೆಳ್ತಂಗಡಿ ರೋಟರಿ ಕ್ಲಬ್ ಕಳೆದ ವರ್ಷ 750 ಮಿಕ್ಕಿ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಂಡಿರುತ್ತಾರೆ. ಈ ವರ್ಷ ಅಂತರಾಷ್ಟ್ರೀಯ ರೋಟರಿ ಸಂಸ್ಥೆಯ ಧ್ಯೇಯ ವಾಕ್ಯ “IMAGE IN ROTARY” ಅಂತರಾಷ್ಟ್ರೀಯ ರೋಟರಿ ಸಂಸ್ಥೆಯ ಅಧ್ಯಕ್ಷ ರೋ ಜೆನ್ನಿಫರ್ ಜೋನ್ಸ್ ರ ಪರಿಕಲ್ಪನೆಯಂತೆ ದ.ಕ, ಕೊಡಗು, ಮೈಸೂರು ಹಾಗೂ ಚಾಮರಾಜ ನಗರಗಳನ್ನೊಳಗೊಂಡ ರೋಟರಿ ಜಿಲ್ಲೆ 3181 ರ ಜಿಲ್ಲಾ ಗವರ್ನರ್ ರೋ ಪ್ರಕಾಶ್ ಕಾರಂತರ ತಂಡ ಆರೋಗ್ಯ ಸಿರಿ, ಜಲಸಿರಿ, ವನಸಿರಿ ಹಾಗೂ ವಿದ್ಯಾಸಿರಿ ಯೋಜನೆಗಳನ್ನು ರೂಪಿಸಿದೆ.

ಬೆಳ್ತಂಗಡಿ ಕ್ಲಬ್ ವಿವಿಧ ಇಲಾಖೆಗಳು, ಸಂಘ ಸಂಸ್ತೆಗಳ ಸಹ ಭಾಗಿತ್ವದಲ್ಲಿ ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದೆ. ಮುಖ್ಯವಾಗಿ ಆರೋಗ್ಯ ತಪಾಸಣಾ ಶಿಬಿರಗಳು, ರಕ್ದಾನ ಶಿಬಿರಗಳು, ಮಕ್ಕಳ ಅಪೌಷ್ಟಿಕತೆ ನಿವಾರಣೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಮಾಹಿತಿ ಕಾರ್ಯಕ್ರಮಗಳು, ವಿದ್ಯಾರ್ಥಿ ವೇತನ, ಮೂಲ ಸೌಕರ್ಯ ಒದಗಣೆ, ಪರಿಸರ ಸಂರಕ್ಷಣೆ ಕಾರ್ಯಕ್ರಮ ಇತ್ಯಾದಿಗಳನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ. ಬೆಂಗಳೂರಿನ ಇಂದಿರಾನಗರ ರೋಟರಿ ಕ್ಲಬ್ ಸಹಯೋಗದಲ್ಲಿ ಸರಕಾರಿ ಪ್ರೌಢ ಶಾಲೆ ನಡದಲ್ಲಿ ರೂ.20 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಗ್ರಂತಾಲಯ ಕಟ್ಟಡವನ್ನು ರೂಪಿಸಲು ಯೋಜನೆಯನ್ನು ರೂಪಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ವಲಯ ಗವರ್ನರ್ ರೋ ಮೇಜರ್ ಜನರಲ್ ಎಂ.ವಿ ಭಟ್, ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಅಬೂಬಕ್ಕರ್, ನೂತನ ಕಾರ್ಯದರ್ಶಿ ರಕ್ಷಾ ರಾಘ್ನೇಶ್, ಕೋಶಾಧಿಕಾರಿ ನಾರಾಯಣ ಪೈ,  ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಬಿ.ಕೆ ಧನಂಜಯ್, ನಿರ್ದೇಶಕರುಗಳಾದ ಪ್ರಕಾಶ್ ನಾರಾಯಣ, ಅ್ಯಂಟನಿ ಟಿ.ಪಿ, ಸಂದೇಶ್ ರಾವ್, ಶ್ರವಣ್ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.