ರಾಜ್ಯ ಸಭೆಗೆ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ: ಟ್ವಿಟ್ ಮೂಲಕ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಳ್ತಂಗಡಿ: ರಾಜ್ಯ ಸಭೆಗೆ ಕರ್ನಾಟಕದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ ಮಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮೂಲಕ ತಿಳಿಸಿದ್ದಾರೆ..

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯ ಸಭೆಗೆ ನಾಮ ನಿರ್ದೇಶನ ಮಾಡುವ ಮೂಲಕ ಮೋದಿ ಸರ್ಕಾರ ಖಾವಂದರ ಸಮಾಜಮುಖಿ ಕೆಲಸಗಳಿಗೆ ಬಹುದೊಡ್ಡ ಗೌರವ ಸಲ್ಲಿಸಿದೆ.

ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಧಾರ್ಮಿಕ,ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರದಲ್ಲಿನ ಅಪಾರ ಕೊಡುಗೆಗೆ ನಾಮನಿರ್ದೇಶನದ ಗೌರವವನ್ನು ಕೇಂದ್ರ ಸರ್ಕಾರ ನೀಡಿದೆ. ಗ್ರಾಮೀಣಾಭಿವೃದ್ಧಿಯನ್ನೇ ಗುರಿಯಾಗಿಸಿಕೊಂಡು ಕಾರ್ಯಪ್ರವೃತ್ತವಾಗಿರುವ ಎಸ್ ಕೆ ಡಿ ಆರ್ ಡಿ ಪಿ,ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ನೀಡುವ ರುಡ್ ಸೆಟ್, ಗ್ರಾಮೀಣಾ ಭಾಗದ ಮಹಿಳೆಯರ ಆರ್ಥಿಕ ಸ್ವಾವಲಂಬನೆ, ಶೈಕ್ಷಣಿಕ ಕ್ಷೇತ್ರದಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸಿರುವ ಖಾವಂದರ ಸಾಧನೆಗೆ ಸಂದ ಗೌರವ ಇದಾಗಿದೆ.
ಧಾರ್ಮಿಕ ಕ್ಷೇತ್ರವಾಗಿ ಧರ್ಮಸ್ಥಳದ ಚತುರ್ವಿದ ದಾನ ಪರಂಪರೆಯನ್ನು ಮತ್ತಷ್ಟು ಮೇಲ್ಮಟ್ಟಕ್ಕೇರಿಸಿದ್ದು ಮಾತ್ರವಲ್ಲದೇ, ಧರ್ಮೋತ್ಥಾನ ಟ್ರಸ್ಟ್ ಮೂಲಕ ಸಾವಿರಾರು ಧಾರ್ಮಿಕ ಕ್ಷೇತ್ರಗಳ ಏಳಿಗೆಗೆ ಕಾರಣವಾಗಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.