ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಂಜೊಟ್ಟಿ:  ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ತಾಲೂಕು ಮಟ್ಟದ ಕರಾಟೆ ಪಂದ್ಯಾಟ ಸೆಂಟ್ ಫ್ರಾನ್ಸಿಸ್ ಸ್ಕೂಲ್ ಕೊಕ್ಕಡದಲ್ಲಿ ಇತ್ತೀಚೆಗೆ ನಡೆಯಿತು.

ಈ ಪಂದ್ಯಾಟದಲ್ಲಿ ಸ್ಟಾರ್ ಲೈನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಮಂಜೋಟ್ಟಿ ಇಲ್ಲಿನ ವಿದ್ಯಾ ರ್ಥಿಗಳು ತಾಲೂಕು ಮಟ್ಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

17 ವರ್ಷದ ಒಳಗಿನ 45-50ಕೆಜಿ ವಿಭಾಗದಲ್ಲಿ ಮೊಹಮ್ಮದ್ ಫಾಝಿಲ್ ( ಪ್ರಥಮ) ಹಾಗೂ 14 ವರ್ಷದ ಒಳಗಿನ 30-35 ಕೆಜಿ ವಿಭಾಗದಲ್ಲಿ ಆಫೀಝ್ ಎಸ್ ಎ ( ಪ್ರಥಮ) ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಫಾತಿಮ ಸನುಬಿಯ 17 ವರ್ಷ ಒಳಗಿನ ವಿಭಾಗದಲ್ಲಿ ತ್ರತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಇವರಿಗೆ ಅಬ್ದುಲ್ ರಹಮಾನ್ ರವರು ತರಬೇತಿ ನೀಡಿದ್ದಾರೆ.

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.