ಜು.29 ರಿಂದ ಆ.1 ರವರೆಗೆ ಸಂಜೆ 6 ಗಂಟೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಡಿಸಿ ಆದೇಶ

ಬೆಳ್ತಂಗಡಿ: ದ.ಕ  ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೆಶಿಸಿದ್ದಾರೆ.

ಜು.29 ರಿಂದ ಆ.1ರವರೆಗೆ ಈ ಆದೇಶ ಜಾರಿಯಲ್ಲಿದ್ದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟು ತೆರೆಯಲು ಅನುಮತಿಯಿದೆ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ದ.ಕ ಜಿಲ್ಲೆಯ 5 ತಾಲೂಕುಗಳಲ್ಲಿ ಇಂದಿನಿಂದ ಆಗಸ್ಟ್ 1ರ ಬೆಳಗ್ಗೆ 8 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧ:

ಬೆಳ್ತಂಗಡಿ: ಸುವ್ಯವಸ್ಥೆ ಕಾಪಾಡುವ ದೃಷ್ಠಿಯಲ್ಲಿ ಇಂದಿನಿಂದ ಆಗಸ್ಟ್ 1 ರವರೆಗೆ ಬೆಳಗ್ಗೆ 8 ಗಂಟೆಯವರೆಗೆ ಬೆಳ್ತಂಗಡಿ, ಸುಳ್ಯ, ಬಂಟ್ವಾಳ, ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಬಾರ್ ಹಾಗೂ ವೈನ್ ಶಾಪ್ ಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಅದರಂತೆ ಇಂದು ಮಧ್ಯಾಹ್ನದಿಂದಲೇ ವೈನ್ ಶಾಪ್ ಗಳು ಬಂದ್ ಆಗಿವೆ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.