ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕಂಡರಿ ಶಾಲೆಯಲ್ಲಿ ಜು.30 ರಂದು ಆಟಿಡೊಂಜಿ ದಿನ ತುಳುನಾಡ ಆಚರಣೆ, ಸಂಸ್ಕೃತಿಯ ಕಾರ್ಯಕ್ರಮ ನಡೆಯಿತು .
ಕಾರ್ಯಕ್ರಮದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ರವೀಂದ್ರ ಶೆಟ್ಟಿ ಬಳೆ0ಜ ಕಾರ್ಯಕ್ರಮ ಉದ್ಘಾಟಿಸಿದರು.
ಶ್ರೀ ಧ. ಮ. ಶಿಕ್ಷಣ ಸಂಸ್ಥೆಗಳ ಕ್ಷೇಮ ಪಾಲನ ಅಧಿಕಾರಿ ಸೋಮಶೇಖರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಮುಖ್ಯಾಯೊಪಾಧ್ಯಾಯ ಸದಾಶಿವ ಪೂಜಾರಿ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಿಕ್ಷಕಿ ತ್ರೀವೇಣಿ ನಿರ್ವಹಿಸಿದರು, ಶಿಕ್ಷಕ ಮೋನಪ್ಪ ಅತಿಥಿಗಳ ಪರಿಚಯಿಸಿದರು, ಶಿಕ್ಷಕ ವೃಂದ,ಹಳೆ ವಿದ್ಯಾರ್ಥಿಗಳು,ವಿದ್ಯಾರ್ಥಿಗಳು ಶಾಲಾ ಸಿಬ್ಬಂದಿಗಳು ಹಾಜರಿದ್ದು ಸಹಕರಿಸಿದರು.
ಈ ಸಂದರ್ಭದಲ್ಲಿ ತುಳು ಭಾಷಾ ವಿಶೇಷಯದಲ್ಲಿ ಶೇ.100 ಅಂಕ ಗಳಿಸಿದ 3 ಮಂದಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.