ಡಾ  ಶೌರ್ಯ.ಎಸ್.ವಿ ಯವರ ಮನೆಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ: ಮುಂದಿನ ವಿದ್ಯಾಭ್ಯಾಸಕ್ಕೆ ಸಹಾಯ ನೀಡುವುದಾಗಿ ಭರವಸೆ

ಬೆಳ್ತಂಗಡಿ: ಸ.ಹಿ.ಪ್ರಾ.ಶಾಲೆ ಕನ್ಯಾಡಿ 2 ಇಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಡಾ  ಶೌರ್ಯ.ಎಸ್.ವಿ ಯವರ ಮನೆಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ ಇವರು ಡಾ.ಶೌರ್ಯ ಎಸ್ ವಿ ಅವರನ್ನು ಸನ್ಮಾನಿಸಿ ಶುಭ ಹಾರೈಸಿ,   ನಿಮ್ಮ ಮುಂದಿನ ವಿದ್ಯಾಭ್ಯಾಸ ಹಾಗೂ ಯಾವುದೇ ಕಾರ್ಯಕ್ರಮಕ್ಕೆ ಹೋಗಲು ಅದಕ್ಕೆ ಬೇಕಾದ ಪೂರ್ಣ ಜವಾಬ್ದಾರಿಯನ್ನು ನಾನು ವಹಿಸಿಕೊಳ್ಳುತ್ತೇನೆ. ಇನ್ನು ಮುಂದಕ್ಕೂ ಅನೇಕ ಕಾರ್ಯಕ್ರಮದಲ್ಲಿ ನಿಮ್ಮ ಮಗಳನ್ನು ಕಳುಹಿಸಿ ಅದಕ್ಕೆ ಬೇಕಾದ ಎಲ್ಲಾ ರೀತಿಯ ತನ್ನಿಂದ ಆಗುವ ಸಹಾಯವನ್ನು ಮಾಡುತ್ತೇನೆ ಎಂದು ಪೋಷಕರಿಗೆ ತಿಳಿಸಿ,  ನಿಮ್ಮ ಇಬ್ಬರು ಹೆಣ್ಣು ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ಬೇಕಾಗುವ ಸಹಾಯವನ್ನು ನಾನು ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಊರಿನ ಹಿರಿಯರು ಮಕ್ಕಳು ಭಾಗವಹಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.