ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿ ನಿವಾಸಿಯಾಗಿರುವ ಚೈತ್ರಾ ಅಡಿಗ ಇವರು ಆ.4 ರಂದು ಮುಂಜಾನೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಇವರು ಪತಿ ದೀಪಕ್ ಹಾಗೂ ಒಂದು ಹೆಣ್ಣು ಮಗುವನ್ನು ಅಗಲಿದ್ದಾರೆ.
ಉಜಿರೆ ಖಾಸಗಿ ಶಾಲೆಯ ಮಾಜಿ ಶಿಕ್ಷಕಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ .ಸಾವಿಗೆ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ.