ಗುರುವಾಯನಕೆರೆ ಎಕ್ಸೆಲ್ ಕಾಲೇಜು ನಿಯೋಗದಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು, ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ನಿಯೋಗದಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಫಲಿತಾಂಶ ಹಾಗೂ ಸಿ ಇ ಟಿ ಫಲಿತಾಂಶಗಳ ಬಗ್ಗೆ ತಿಳಿದು ಡಾ. ಹೆಗ್ಗಡೆಯವರು ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದರು. ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ ಅಭಿರಾಮ್, ಪ್ರಾಧ್ಯಾಪಕರಾದ ಡಾ. ನವೀನ್ ಕುಮಾರ್ ಮರಿಕೆ, ಪುರುಷೋತ್ತಮ್, ಸಹನಾ, ನಿಶಾ ಪೂಜಾರಿ, ರೂಪಾ, ಜಯರಾಮ್, ಶೃತಿ ಶೆಟ್ಟಿ ಹಾಗೂ ರೋಷನ್  ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.