ಹತ್ಯಡ್ಕ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2021-22ನೇ ಸಾಲಿನಲ್ಲಿ ಮಾಡಿರುವ ವಿಶೇಷ ಸಾಧನೆಗೆ ದ.ಕ ಜಿ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿಗೆ ಆಯ್ಕೆಯಾಗಿದ್ದು ಆ.5 ರಂದು ದ.ಕ.ಜಿ ಕೇಂದ್ರ ಸಹಕಾರಿ ಬ್ಯಾಂಕಿನ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ರಾಘವೇಂದ್ರ ನಾಯಕ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರು ಪ್ರಶಸ್ತಿಯನ್ನು ಸ್ವೀಕರಿಸಿದರು.