ವೇಣೂರು: ಭಾರತೀಯ ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಗೆ ಕೇಂದ್ರ ಸರಕಾರದಿಂದ ನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಪೆರಿಂಜೆ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದ ಅನುವಂಶೀಯ ಆಡಳಿತದಾರರಾದ ಎ. ಜೀವಂಧರ ಕುಮಾರ್ ಅವರು ಕ್ಷೇತ್ರದ ವತಿಯಿಂದ ಸಮ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ವಿಕಾಸ್ ಜೈನ್ ಹಾಗೂ ವಿಶ್ವಾಸ್ ಜೈನ್ ಜೊತೆಗಿದ್ದರು.