ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಕರಾಟೆ ಸ್ಪರ್ಧೆ 2022 ಇದರ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ: ದ.ಕ.ಜಿ.ಪ.ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ , ಉಪ ನಿರ್ದೇಶಕರು ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ, ವಾಣಿ ಆಂಗ್ಲಮಾಧ್ಯಮ ಶಾಲೆ ಹಳೇಕೋಟೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಕರಾಟೆ ಸ್ಪರ್ಧೆ 2022 ಇದರ ಉದ್ಘಾ ಟನೆಯು ಆ.6ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಜರಗಿತು.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ  ಉದ್ಘಾಟಿಸಿದರು. ಬೆಳ್ತಂಗಡಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷ  ಜಯಾನಂದ ಗೌಡ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ , ಪ. ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ , ದೈಹಿಕ ಶಿಕ್ಷಣಾಧಿಕಾರಿ ಭುವೇನೇಶ್, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷ ಕೃಷ್ಣ ಪ್ಪ ಗೌಡ, ಕಾರ್ಯದರ್ಶಿ ಗಣೇಶ್ ಗೌಡ,  ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ, ಕರಾಟೆ ತಿರ್ಪುಗಾರ ದಿನೇಶ್ ಗೌಡ, ಶಿಕ್ಷಕ ಮತ್ತು ರಕ್ಷಕ ಸಂಘದ ಅಧ್ಯಕ್ಷ ನಾರಾಯಣ ಗೌಡ,  ಉಪಾಧ್ಯಕ್ಷೆ ಉಷಾಗೌಡ ಉಪಸ್ಥಿತರಿದ್ದರು.

ವಾಣಿ ಶಾಲಾಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪದಾಯರಾದ ಲಕ್ಷ್ಮೀನಾರಾಯಣ  ಸ್ವಾಗತಿಸಿದರು, ಶಿಕ್ಷಕಿ ಪ್ರಮೀಳಾ ನಿರೂಪಿಸಿ, ಶಿಕ್ಷಕಿ ಸುಹಾಸಿನಿ ಧನ್ಯವಾದಗೈದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.