ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಝಝ್ -2022 ಕಾರ್ಯಕ್ರಮ

ಮಡಂತ್ಯಾರು:  ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಮಾನವೀಯ ಸಂಘ ಇದರ ಸಹಯೋಗದಲ್ಲಿ ಬಿಝಝ್ – 2022 ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಡಾ.ಜೋಸೆಫ್ ಎನ್.ಎಂ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ಫಾ. ವಿಲಿಯಂ ಡಿ’ಸೋಜಾ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಡಾ.ಶಾಮ್ ಭಟ್ ಮಾತನಾಡಿ ಕಲಾ ವಿಭಾಗ ಇಂದು ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯಂತ ಮಹತ್ತರವಾದ ವಿಭಾಗವಾಗಿದೆ. ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಲಾ ವಿಭಾಗದ ಜ್ಞಾನ ಅಗತ್ಯವಾಗಿದೆ. ಇಂತಹ ಕಲಾ ವಿಭಾಗದ ವಿದ್ಯಾರ್ಥಿಗಳು ಇಂದು ಇಂತಹ ಮಹತ್ವದ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ವಿದ್ಯಾರ್ಥಿಗಳನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಸೇಕ್ರೆಡ್ ಹಾರ್ಟ್ ಸಂಸ್ಥೆಯಲ್ಲಿ 12 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ, ವೃತ್ತಿ ಜೀವನದಿಂದ ನಿವೃತ್ತಿ ಹೊಂದುತ್ತಿರುವ ಪ್ರೊ.ಜನಾರ್ದನ್ ನಾಯರ್ ರವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಾಗೂ 2021-22 ನೇ ಸಾಲಿನ ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲೇ ಮೊದಲ ರಾಂಕ್ ಮತ್ತು ಎರಡು ಚಿನ್ನದ ಪದಕ ವಿಜೇತೆ ರೇಷ್ಮಾ ಡಿ’ಸೋಜಾ ಇವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ವೇದಿಕೆಯಲ್ಲಿ ಪ್ರೊ.ಪೌಲ್ ಮಿನೇಜಿಸ್, ಪ್ರೊ.ಪ್ರಕಾಶ್ ಕ್ರಮಧಾರಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಯೋಜಕರಾದ ಪ್ರೊ.ಅರುಣ್ ಜಾನ್ಸನ್ ಬ್ರಾಂಕೋ ಸ್ವಾಗತಿಸಿದರು. ವಿದ್ಯಾರ್ಥಿ ಸಂಯೋಜಕ ಸಚಿನ್ ವಿಲ್ಸನ್ ಧನ್ಯವಾದ ಸಮರ್ಪಿಸಿದರು. ಶಾಹಿದ್ ಅಫ್ರೀದ್ ಮತ್ತು ನಿಖಿತ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.