ಉಜಿರೆ ಮುಂಡತೋಡಿ ಶಾಲೆಯ ಅಭಿವೃದ್ಧಿಗೆ ವಿವಿಧ ಕೊಡುಗೆ

ಉಜಿರೆ: ಬದುಕು ಕಟ್ಟೋಣ ಬನ್ನಿ ತಂಡ, ಗ್ರಾಮ ಪಂಚಾಯತ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ತಾಲೂಕು ಪತ್ರಕರ್ತರ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ದಿನಾಚರಣೆ, ಮತ್ತು ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಯೋಜನೆಯಡಿ ಶಾಲೆಗೆ ಅಗತ್ಯ ಕೊಡುಗೆ ಮತ್ತು ಅಭಿವೃದ್ಧಿ ಆ.14 ರಂದು ಉಜಿರೆ ಮುಂಡತೋಡಿ ಸ. ಹಿ. ಪ್ರಾ. ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಉಜಿರೆ ಜನಾರ್ಧನ ದೇವಸ್ಥಾನದ ಶರತ್ ಕೃಷ್ಣ ಪಡುವೆಟ್ನಯ ಧ್ವಜಾರೋಹಣ ಗೈದರು. ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷೆ ರೋ.ಮನೋರಮಾ ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಎಚ್. ಎಸ್., ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರುಗಳಾದ ಕೆ. ಮೋಹನ್ ಕುಮಾರ್, ರಾಜೇಶ್ ಪೈ, ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಬಿ. ಶಿರ್ಲಾಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ. ಎಚ್. ಪ್ರಕಾಶ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧಕ್ಷೆ ರೇವತಿ, ಶಾಲಾ ಮುಖ್ಯ ಶಿಕ್ಷಕ ರಮೇಶ್, ರೋಟರಿ ಕ್ಲಬ್ ಕಾರ್ಯದರ್ಶಿ ರಕ್ಷಾ ರಾಘನೇಶ್, ಮತ್ತು ಸದಸ್ಯರು, ಪತ್ರಕರ್ತರ ಸಂಘದ ಕಾರ್ಯದರ್ಶಿ ಚೈತ್ರೆಶ್ ಇಳಂತಿಲ, ಮತ್ತು ಪತ್ರಕರ್ತರು, ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು ಮತ್ತು ಸದಸ್ಯರು, ಸಿಬ್ಬಂದಿಗಳು, ಎಸ್ ಡಿ. ಎಂ. ಸಿ ಸದಸ್ಯರು, ಶಿಕ್ಷಕರು, ಊರವರು ಹಾಜರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.