ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವದ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಕಾಲೇಜು ಕ್ರೀಡಾಂಗಣದಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಜೋಸೆಫ್ ಎನ್.ಎಮ್ ಬಂದಂತಹ ಅತಿಥಿಗಳನ್ನು ಸ್ವಾಗತಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಮಾನ್ಯ ಸಂಚಾಲಕರಾದ ಫಾ. ಬೇಜಿಲ್ ವಾಜ್ ಮಾತನಾಡಿ ಸ್ವಾತಂತ್ರ್ಯ ಹೋರಾಟಗಾರರ ಧೈರ್ಯ, ತ್ಯಾಗ, ಬಲಿದಾನ ಎಂದೆಂದೂ ಅವಿಸ್ಮರಣೀಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸೇಕ್ರೆಡ್ ಹಾರ್ಟ್ ಚರ್ಚಿನ ಸಹಾಯಕ ಗುರುಗಳಾದ ವಂ. ಫಾ. ವಿಲಿಯಂ ಡಿಸೋಜ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೇ. ಫಾದರ್ ಜೆರೋಮ್ ಡಿಸೋಜ, ಸೇಕ್ರೆಡ್ ಹಾರ್ಟ್ ಇಂಗ್ಲಿಷ್ ಮೀಡಿಯಂ ಶಾಲೆಯ ಮುಖ್ಯೋಪಾದ್ಯಯ ರೇ. ಫಾದರ್ ದೀಪಕ್ ಡೆಸಾ, ಸೇಕ್ರೆಡ್ ಹಾರ್ಟ್ ಹೈಸ್ಕೂಲ್ ಇದರ ಮುಖ್ಯಸ್ಥ  ಮೋಹನ್ ನಾಯಕ್, ಗಾರ್ಡಿಯನ್ ಏಂಜೆಲ್ಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಎಲೆನ್ ಮೋನಿಕಾ ಲೋಬೋ , ಸೇಕ್ರೆಡ್ ಹಾರ್ಟ್ ಚರ್ಚ್ನ ಆಡಳಿತ ಮಂಡಳಿಯ ಉಪಾಧ್ಯಕ್ಷ  ಲಿಯೋ ರೊಡ್ರಿಗಸ್ ಐಡ್ರೋ ಜನ್ ನ ಕೇಸರಿ , ಬಿಳಿ, ಹಸಿರು ಬಲೂನ್ ಗಳನ್ನು ಬಾನೆತ್ತರಕ್ಕೆ ಹಾರಿಸುತ್ತ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಆಜಾದಿ ಕಾ ಅಮೃತ ಮಹೋತ್ಸವವದ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ಕಾರ್ಯಕ್ರಮದ ನಿರೂಪಣೆ ಹಾಗೂ ನೆಲ್ಸನ್ ರವರು ಧನ್ಯವಾದವಿತ್ತರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.