ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ: ಆರಗ ಜ್ಞಾನೇಂದ್ರ

ಬೆಂಗಳೂರು: ಇನ್ನು ಮುಂದೆ ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಆನಂದಪುರಂ ನ ಮುರುಘಾ ಮಠದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಈಗ 50 ಸಾವಿರ ಹಾಗೂ 1 ಲಕ್ಷಕ್ಕೂ ಹಳೆ ಕಾರುಗಳು ಸಿಗುತ್ತಿವೆ. ಗಾರೆ ಮಾಡುವವರು, ಮೀನು ಹಿಡಿಯುವವರು ಕಾರು ತೆಗೆದುಕೊಂಡು ಹೋಗುತ್ತಾರೆ. ಅಂತವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದು ಸರಿಯಲ್ಲ. ಎಂದ ಗೃಹ ಸಚಿವರು, ಈ ವಿಷಯವಾಗಿ ಶಾಸಕ ಎಚ್ ಹಾಲಪ್ಪ ಹರತಾಳು  ನಾನು ಮುಖ್ಯಮಂತ್ರಿ ಬಳಿ ಚರ್ಚಿಸಿದ್ದೇವೆ. ಈ ಕಾನೂನಿನಿಂದ ಬಡವರು ಹೊಂದಿರುವ ಕಾರ್ಡ್ ರದ್ದಾಗುತ್ತದೆ. ಅವರ ಜೀವನಾಧಾರಕ್ಕೆ ತೊಂದರೆಯಾಗುತ್ತದೆ ಎಂದು ಮನವರಿಕೆ ಮಾಡಿದ್ದೇವೆ. ಬಡವರ ಮೇಲೆ ಕರುಣೆ ತೋರಿ ಸಿಎಂ ಆದೇಶ ಹೊರಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.