ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ:  ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರ್ಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ
ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಹ್ಯಾಂಡ್ ಬಾಲ್ ಪಂದ್ಯಾಟವು ಸೆ.5ರಂದು ನಡೆಯಿತು.

 

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬಾಲಕಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕರು ದ್ವಿತೀಯ ಸ್ಥಾನ ಹಾಗೂ ಪ್ರಾಥಮಿಕ ವಿಭಾಗದ ಬಾಲಕರು ದ್ವಿತೀಯ ಸ್ಥಾನವನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ದೈಹಿಕ ಶಿಕ್ಷಕರಾದ ಶ್ರೀ ಶರತ್ ಪಿಂಟೋ ತರಬೇತಿ ನೀಡಿರುತ್ತಾರೆ. ಶಾಲೆಯ ಘನತೆಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯರಾದ ವಂ.ಫಾ. ಕ್ಲಿಫರ್ಡ್ ಪಿಂಟೋರವರು ಅಭಿನಂದಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.