Site icon Suddi Belthangady

ಕರ್ನಾಟಕ ರಾಜ್ಯ ಗ್ರಂಥಾಲಯ ಮೇಲ್ವಿಚಾರಕರು ಹಾಗೂ ಮಾಹಿತಿಗಾರರ ಸಂಘ ಬೆಳ್ತಂಗಡಿ ತಾಲೂಕು ಶಾಖೆ ವತಿಯಿಂದ ಕನಿಷ್ಠ ವೇತನ ಜಾರಿ ಮಾಡುವಂತೆ ಶಾಸಕರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಗ್ರಂಥಾಲಯ ಮೇಲ್ವಿಚಾರಕರು ಹಾಗೂ ಮಾಹಿತಿಗಾರರ ಸಂಘ ಬೆಳ್ತಂಗಡಿ ತಾಲೂಕು ಶಾಖೆ ವತಿಯಿಂದ ಕನಿಷ್ಠ ವೇತನ ಜಾರಿ ಮಾಡುವಂತೆ ಶಾಸಕರಿಗೆ ಮನವಿಯನ್ನು ನೀಡಲಾಯಿತು.

ಗ್ರಾಮ ಪಂಚಾಯತ್ ಗ್ರಂಥಾಲಯವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧೀನದಲ್ಲಿರುವ ಗ್ರಾಮಪಂಚಾಯತ್ ಗಳಿಗೆ ವರ್ಗಾಯಿಸಲಾಗಿದೆ. ರಾಜ್ಯದಲ್ಲಿ ಒಟ್ಟು 5633 ಗ್ರಂಥಾಲಯ ಮೇಲ್ವಿಚಾರಕರು ಇದ್ದು, ಕೆಲಸದ ಸಮಯವನ್ನು ರಾಜ್ಯ ಸರಕಾರದಿಂದ ಸಾರ್ವಜನಿಕ ರಜೆ ಎಂದು ಘೋಷಿಸಲ್ಪಟ್ಟ ರಜಾದಿನಗಳು ಮತ್ತು 2ನೇ ಶನಿವಾರ ಹಾಗೂ ವಾರದ ರಜೆಯನ್ನು ಹೊರತುಪಡಿಸಿ ಬೆಳಿಗ್ಗೆ ಗಂಟೆ 9ರಿಂದ 11 ಮತ್ತು ಸಂಜೆ 4ರಿಂದ 6 ರವರೆಗೆ ಕಾರ್ಯನಿರ್ವಹಿಸುತ್ತಿದ್ದೇವೆ. ನಮಗೆ ಕನಿಷ್ಠ ವೇತನವನ್ನು ಜಾರಿ ಮಾಡಿ ನಮ್ಮನ್ನು ಪೂರ್ಣಕಾಲಿಕ ಪಂಚಾಯತ್ ನೌಕರರೆಂದು ಪರಿಗಣಿಸಬೇಕು ಮತ್ತು ಸೇವಾಭದ್ರತೆಯನ್ನು ಕಲ್ಪಿಸಿಕೊಡಬೇಕೆಂದು ಶಾಸಕ ಹರೀಶ್ ಪೂಂಜರಿಗೆ ಕರ್ನಾಟಕ ರಾಜ್ಯ ಗ್ರಂಥಾಲಯ ಮೇಲ್ವಿಚಾರಕರು ಮತ್ತು ಮಾಹಿತಿಗಾರ ಸಂಘ ಬೆಳ್ತಂಗಡಿ ತಾಲೂಕು ಶಾಖೆ ಪದಾಧಿಕಾರಿಗಳು ಮನವಿಯನ್ನು ಸಲ್ಲಿಸಿದರು.

Exit mobile version