Site icon Suddi Belthangady

ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಹೋಲಿ ರಿಡೀಮರ್ ಶಾಲೆಯ ಬಾಲಕರು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ ಬಂಗಾಡಿ ವಲಯ ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟವು  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ಇವರ ಸಹಭಾಗಿತ್ವದಲ್ಲಿ  ಸೆ.9ರಂದು ನಡೆಯಿತು.

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಪ್ರಾಥಮಿಕ ವಿಭಾಗದ ಬಾಲಕರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ದೈಹಿಕ ಶಿಕ್ಷಕ ಶರತ್ ಪಿಂಟೋ ತರಬೇತಿ ನೀಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Exit mobile version