Site icon Suddi Belthangady

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

 

ಬೆಳ್ತಂಗಡಿ:ಸೆಪ್ಟೆಂಬರ್ 9 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಶಾರದಾ ಪದವಿ ಪೂರ್ವ ಕಾಲೇಜು ಮಂಗಳೂರು ಇವರ ಆತಿಥ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಗೌತಮ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ತಂಡವನ್ನು ತರಬೇತಿ ಗೊಳಿಸಿದ ಕಾಲೇಜಿನ ಕ್ರೀಡಾ ಸಂಯೋಜಕ ನಂದಕುಮಾರ್ ನ್ನು ಮತ್ತು ರಾಜ್ಯಮಟ್ಟಕ್ಕೆ ಆಯ್ಕೆ ಗೊಂಡ ವಿದ್ಯಾರ್ಥಿಗೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಡಿ. ಯದುಪತಿ ಗೌಡ ಮತ್ತು ಉಪನ್ಯಾಸಕ ವೃಂದ ಅಭಿನಂದಿಸಿದರು.

Exit mobile version