Site icon Suddi Belthangady

ಅನಂತೋಡಿ ದೇವಸ್ಥಾನದಲ್ಲಿ ಅನಂತ ಚತುರ್ಥಿ ವಿಶೇಷ ಪೂಜೆ

ಬೆಳಾಲು : ಇಲ್ಲಿಯ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಅನಂತ ಚತುರ್ದಶಿ (ನೋಂಪು) ವಿಶೇಷ ಪೂಜೆ ನಡೆಯಿತು.

ದೇವರಿಗೆ ಪಂಚಾಮೃತ ಅಭಿಷೇಕ, ಪವಮಾನ ಕಳಶಭಿಷೇಕ, ತೆನೆ ಕಟ್ಟುವುದು, ಬಲಿವಾಡು ಸೇವೆ, ಮಹಾ ಪೂಜೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ದೀಪಾಲಂಕಾರ, ರಂಗ ಪೂಜೆ ನಡೆಯಿತು.

ಈ ಕಾರ್ಯಕ್ರಮಗಳಲ್ಲಿ ದೇವಸ್ಥಾನದ ಮೊಕ್ತೇಸರ ಜೀವಂದರ ಜೈನ್ ಬೆಳಾಲು ಗುತ್ತು, ಅಸ್ರನ್ನ ಗಿರೀಶ್ ಬಾರಿತ್ತಾಯ,ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನೋಟರಿ ವಕೀಲ ಶ್ರೀನಿವಾಸ ಗೌಡ,ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೇರ್ಮುಣ್ಣಾಯ, ಕಾರ್ಯದರ್ಶಿ ಸತೀಶ್ ಎಳ್ಳುಗದ್ದೆ, ಮಹಿಳಾ ಸಮಿತಿ ಅಧ್ಯಕ್ಷೆ ಹೇಮಲತಾ ಶ್ರೀನಿವಾಸ ಗೌಡ ಗಣಪನ ಗುತ್ತು, ಶ್ರೀ ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಗುರುರಾಜ ಓಡಿಪ್ರೊಟ್ಟು,ಗ್ರಾಮ ಪಂಚಾಯತ್ ಸದಸ್ಯೆ ವಿದ್ಯಾ ಶ್ರೀನಿವಾಸ ಗೌಡ, ಹದಿನಾಲ್ಕು ಬೈಲುವಾರು ಸಮಿತಿಯ ಪದಾನ ಸಂಚಾಲಕರು, ಹಾಗೂ ಸಂಚಾಲಕರು, ವ್ಯವಸ್ಥಾಪನಾ ಸಮಿತಿಯ ಸದಸ್ಯರು,ಊರ ಪರ ಊರ ಭಕ್ತಾಧಿಗಳು ಉಪಸ್ಥಿತರಿದ್ದರು.

Exit mobile version