ಮುಂಡಾಜೆ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಮುಂಡಾಜೆ ಉ. ಹಿ. ಪ್ರಾ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

0

ಮುಂಡಾಜೆ:  ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ಮುಂಡಾಜೆ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ 176 ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.

ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ಮನೋರಮಾ ವಹಿಸಿದ್ದರು. ಪದಾಧಿಕಾರಿಗಳಾದ ಮೇಜರ್ ಜನರಲ್ ಎಂ.ವಿ.ಭಟ್,ಅಡೂರು ವೆಂಕಟ್ರಾಯ, ನಾರಾಯಣ ಭಿಡೆ,ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ ಬಂಗೇರ ಉಪಸ್ಥಿತರಿದ್ದರು.

ಶಿಕ್ಷಕಿ ಸೇವಂತಿ ಸ್ವಾಗತಿಸಿ, ಸುಮಂಗಲಾ ವಂದಿಸಿದರು.

LEAVE A REPLY

Please enter your comment!
Please enter your name here