Site icon Suddi Belthangady

ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಪ್ರಯುಕ್ತ ಸ್ವಯಂ ಸೇವಕರಿಗೆ ಹಣ್ಣಿನ ಗಿಡ ವಿತರಣೆ

ಮಡಂತ್ಯಾರು: ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಅಂಗವಾಗಿ   ಸೆ. 24 ರಂದು ಸೇಕ್ರೆಡ್ ಹಾರ್ಟ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಇದರ ವತಿಯಿಂದ ಸ್ವಯಂ ಸೇವಕರಿಗೆ ಹಣ್ಣಿನ ಗಿಡ ವಿತರಣೆ ಮಾಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಜೋಸೆಫ್ ಎನ್. ಎಮ್ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯ ದಿನದ ಮಹತ್ವವನ್ನು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಜೋಸೆಫ್ ಎನ್. ಎಮ್, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಗಳಾದ ಪ್ರಶಾಂತ್, ಅರುಣ್ ಜಾನ್ಸನ್ ಬ್ರಾಂಕೊ, ಕುಮಾರಿ ಜೀವ ವಿ.ಸಿ,  ರೋಬಿನ್ ಸೇರ ಹಾಗೂ ಎನ್. ಎಸ್. ಎಸ್ ನ ಸ್ವಯಂ ಸೇವಕರು ಭಾಗವಹಿಸಿದ್ದರು.

ಯೋಜನಾಧಿಕಾರಿಗಳದ ಪ್ರೊ. ಪ್ರಶಾಂತ್ ಕಾರ್ಯಕ್ರಮವನ್ನು ನಿರೂಪಿಸಿದರು.

Exit mobile version