ಸಿಯೋನ್ ಆಶ್ರಮದಲ್ಲಿ ಉಚಿತ ವೈದ್ಯಕೀಯ ಹಾಗೂ ದಂತ ಚಿಕಿತ್ಸಾ ಶಿಬಿರ

0

ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲುನಲ್ಲಿ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು  ಸೆ . 25ರಂದು ಆಯೋಜಿಸಲಾಗಿತ್ತು. ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು.

ಡಾ.ಹನಾ ಸಂಶುದ್ದೀನ್, ಮೆಡಿಕಲ್ ಆಫೀಸರ್, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ, ಡಾ.ಪ್ರಕೃತಿ ಶೆಟ್ಟಿ ದಂತವೈದ್ಯರು ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. 150ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಸಿಯೊನ್ ಆಶ್ರಮದ ಮಾನೇಜಿಂಗ್ ಟ್ರಸ್ಟಿಯವರಾದ ಡಾ.ಯು.ಸಿ ಪೌಲೋಸ್‌ರವರು, ಟ್ರಸ್ಟಿ ಸದಸ್ಯರಾದ ಶ್ರೀಮತಿ ಮೇರಿ ಯು.ಪಿಯವರು. ವೈದ್ಯರಾದ ಡಾ.ಗೋಪಿಕೃಷ್ಣರವರು, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here