Site icon Suddi Belthangady

ಕುಕ್ಕೆಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ


ಕುಕ್ಕೆಡಿ : ಕುಕ್ಕೆಡಿ ಗ್ರಾಮ ಪಂಚಾಯತ್ 2022-23ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಅ.14 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ಧನ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯಪಾಲ ಅಭಿಯಂತರ ನಿತಿನ್ ಇವರು ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿ ಸಭೆಯನ್ನು ಮುನ್ನಡೆಸಿದರು.

ಪಂಚಾಯತ್ ಉಪಾಧ್ಯಕ್ಷೆ ಗೀತಾ, ಪಂಚಾಯತ್ ಸದಸ್ಯರು, ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪಂ.ಅಭಿವೃದ್ಧಿ ಅಧಿಕಾರಿ ನವೀನ್ ಎ.ಸ್ವಾಗತಿಸಿ ಲೆಕ್ಕ ಪತ್ರ ಹಾಗೂ ವರದಿ ವಾಚಿಸಿದರು. ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು. ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು. ಸಿಬ್ಬಂದಿಗಳು ಸಹಕರಿಸಿದರು.

Exit mobile version