Site icon Suddi Belthangady

ನಡ ಗ್ರಾಮ ಪಂಚಾಯತ್ ನ 2022-23ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ

ನಡ: ನಡ ಗ್ರಾಮ ಪಂಚಾಯತ್ ನ 2022-23ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಅ.21ರಂದು ಗ್ರಾ.ಪಂ ಸಭಾಭವನದಲ್ಲಿ ಜರುಗಿತು.

ಸಭೆಯಲ್ಲಿ ನಡ ಗ್ರಾ.ಪಂ ಅಧ್ಯಕ್ಷರಾದ ಎ.ವಿಜಯ ಗೌಡ ಅಧ್ಯಕ್ಷತೆಯನ್ನು ವಹಿಸಿದ್ದರು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಪಂಚಾಯತ್ ರಾಜ್ ಉಪವಿಭಾಗದ ಇಂಜಿನಿಯರ್ ನಿತಿನ್ ಭಾಗಿಯಾಗಿದ್ದರು.

ವೇದಿಕೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ವಿನುತ, ಗ್ರಾ.ಪಂ ಸದಸ್ಯರು, ಇಲಾಖಾಧಿಕಾರಿಗಳು, ಉಪಸ್ಥಿತರಿದ್ದರು.

ಕಳೆದ ಗ್ರಾಮ ಸಭೆಯ ಅನುಪಾಲನಾ ವರದಿಯನ್ನು ಗ್ರಾ.ಪಂ ಕಾರ್ಯದರ್ಶಿ ಕಿರಣ್ ಎಂ ಮಂಡಿಸಿದರು. ವಿವಿಧ ಶೀರ್ಷಿಕೆಯಡಿ ಜಮಾ ಖರ್ಚಿನ ವಿವರವನ್ನು ಗುಮಾಸ್ತೆ ಭಾರತಿಯವರು ನೀಡಿದರು.

ತಾಲೂಕು ಮಟ್ಟದ ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದು ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಮತ್ತು ಸರಕಾರದ ವಿವಿಧ ಯೋಜನೆಗಳ ಬಗ್ಗೆ ಅರ್ಜಿಗಳನ್ನು ಸ್ವೀಕರಿಸಲಾಯಿತು ಮತ್ತು ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು. ವಾರ್ಡ್  ಸಭೆಗಳಲ್ಲಿ ಬಂದ ಪ್ರಸ್ತಾವನೆಗಳ ಅನುಮೋದನೆ,  ವಿವಿಧ ಯೋಜನೆಗಳಿಗೆ ಫಲಾನುಭವಿಗಳ ಆಯ್ಕೆ ಹಾಗೂ ಇಲಾಖಾ ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ತಂಡ, ಗ್ರಾಮಸ್ಥರು ಉಪಸ್ಥಿತರಿದ್ದರು.

ಸ್ವಾಗತ ಪಂ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ ಮಾಡಿದರು

Exit mobile version