Site icon Suddi Belthangady

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತು 2022-23ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಅ.27 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ  ಜಯ ಮೋನಪ್ಪಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ನಡೆಯಿತು.

ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯ ಜಾನುವಾರು ಅಭಿವೃದ್ಧಿ ಅಧಿಕಾರಿ ಡಾ. ಜಯಕೀರ್ತಿ ಇವರು ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿ ಸಭೆಯನ್ನು ಮುನ್ನಡೆಸಿದರು.

ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ಪಿ., ಪಂಚಾಯತ್ ಸದಸ್ಯರು, ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪಂ.ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ., ಲೆಕ್ಕ ಸಹಾಯಕಿ ಪ್ರಮೀಳಾ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.

ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು. ಸಿಬ್ಬಂದಿಗಳು ಸಹಕರಿಸಿದರು. ಸಿಬ್ಬಂದಿ ಡಾ. ದೇವಿಪ್ರಸಾದ್ ಬೊಳ್ಮ ನಿರೂಪಿಸಿದರು.

Exit mobile version