Site icon Suddi Belthangady

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯಕೆರೆ ಇಲ್ಲಿ ಅ.30ರಂದು ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆ ಸಾಹಿತ್ಯದ ಸಾಧ್ಯತೆ, ಸವಾಲುಗಳ ಪರಿಕಲ್ಪನೆ ಯಲ್ಲಿ ನಡೆದ ಅಕ್ಷರೋತ್ಸವ ರಾಜ್ಯ ಮಟ್ಟದ ಸಾಹಿತ್ಯ ಮೇಳ ಉದ್ಘಾಟನೆ ಯನ್ನು ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ನಿಕಟ ಪೂರ್ವ ಅಧ್ಯಕ್ಷ ಅಜಕ್ಕಳ ಗಿರೀಶ್ ಭಟ್ ನೆರವೇರಿಸಿದರು.

ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ . ಜೋಸೆಫ್ ಎನ್ ಎಂ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಪುಂಜಾಲಕಟ್ಟೆ ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಟಿ ಕೆ.ಶರತ್ ಕುಮಾರ್ ಕನ್ನಡ ಧ್ವಜಾರೋಹಣ, ಗುರುದೇವ ಕಾಲೇಜಿನ ಪ್ರಾಂಶುಪಾಲೆ ಕಾಲೇಜಿನ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ವಹಿಸಿದರು. ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಪಿ ಎನ್ ಉದಯಚಂದ್ರ ಅಕ್ಷರೋತ್ಸವ ಭಾಗ 1ಕವಿತೆ ಲೋಕಾರ್ಪಣೆ ಗೊಳಿಸಿದರು.

ಎಸ್ ಡಿ ಎಂ ಕಾಲೇಜಿನ ವಿಶ್ರಾಂತ ಕುಲಸಚಿವ ಡಾ. ಬಿ.ಪಿ.ಸಂಪತ್ ಕುಮಾರ್ ಕಾವ್ಯಯಾನ ಕವನ ಸಂಕಲನ ಬಿಡುಗಡೆ ಮಾಡಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಕೇಶವ ಬಂಗೇರ ಮುಖ್ಯ ಅತಥಿಗಳಾಗಿದ್ದರು. ಕುವೆಟ್ಟು  ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಉಪಾಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ,ಉದ್ಯಮಿ ಶಮಾಂತ್ ಕುಮಾರ್ ಜೈನ್ , ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಅಭಿರಾಮ್ ಬಿ ಎಸ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ   ಸಾಧಕರಿಗೆ ಎಕ್ಸೆಲ್ ಅಕ್ಷರ ಗೌರವ ನಡೆಯಿತು. ಕಾಲೇಜಿನ ಪ್ರಾಚಾರ್ಯ ನವೀನ್ ಸ್ವಾಗತಿಸಿದರು. ಅಜಿತ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು.

Exit mobile version