ಮಾಜಿ ಶಾಸಕ ಕೆ ವಸಂತ ಬಂಗೇರರ ಕಾರ್ಯಾಲಯಕ್ಕೆ ಭೇಟಿ ನೀಡಿ ಸಮಾಲೋಚನಾ ಸಭೆ ನಡೆಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್

0

ಮಾಜಿ ಶಾಸಕ ಕೆ ವಸಂತ ಬಂಗೇರರ ಕಾರ್ಯಾಲಯಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ/ಬೆಳ್ತಂಗಡಿ ವಿಧಾನಸಭಾ ಉಸ್ತುವಾರಿ ಟಿ ಎಂ ಶಾಹಿದ್ ತೆಕ್ಕಿಲ್ ಭೇಟಿ-ಪಕ್ಷ ಸಂಘಟನೆಯ ಬಗೆಗೆ ಸಮಾಲೋಚನೆ

ಬೆಳ್ತಂಗಡಿ:   ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಉಸ್ತುವಾರಿ ಶಾಹಿದ್ ತೆಕ್ಕಿಲ್ ರವರು ನ.2 ರಂದು ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ ವಸಂತ ಬಂಗೇರರವರನ್ನು ಕಾರ್ಯಾಲಯದಲ್ಲಿ ಭೇಟಿಯಾಗಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ಸಿನ ಅಧ್ಯಕ್ಷರಾದ ಶೈಲೇಶ್ ಕುಮಾರ್ ಕೆ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ಸಿನ ಅಧ್ಯಕ್ಷರಾದ ರಂಜನ್ ಜಿ ಗೌಡ, ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್, ಕೆಪಿಸಿಸಿ ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರದಾನ ಕಾರ್ಯದರ್ಶಿ ಸಂದೀಪ್ ಎಸ್ ನೀರಲ್ಕೆ ಅರ್ವ, ಬೆಳ್ತಂಗಡಿ ನಗರ ಬ್ಲಾಕ್ ಎಸ್ ಸಿ ಘಟಕದ ಪ್ರಧಾನ ಕಾರ್ಯದರ್ಶಿ ಅವಿನಾಶ್, ಬೆಳ್ತಂಗಡಿ ನಗರ ಬ್ಲಾಕ್ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷ ದಯಾನಂದ ದೇವಾಡಿಗ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here