Site icon Suddi Belthangady

ಕೊಯ್ಯೂರು ಗ್ರಾಮ ಪಂಚಾಯತ್ ಗ್ರಾಮ ಸಭೆ


ಕೊಯ್ಯೂರು :ಕೊಯ್ಯೂರು ಗ್ರಾಮ ಪಂಚಾಯತ್  2022-23ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ನ. 4 ರಂದು ಕೊಯ್ಯೂರು ಪಂಚಾಯತ್ ವಠಾರದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿ ಸಭೆಯನ್ನು ಮುನ್ನಡೆಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಮಿತಾ,ಪಂಚಾಯತ್ ಸದಸ್ಯರು, ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪಂ.ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಎಸ್.ಸ್ವಾಗತಿಸಿ ನಿರೂಪಿಸಿದರು. ಸಿಬ್ಬಂದಿ ವರದಿ ಹಾಗೂ ಲೆಕ್ಕ ಪತ್ರ ವಾಚಿಸಿದರು. ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು. ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು. ಸಿಬ್ಬಂದಿಗಳು ಸಹಕರಿಸಿದರು.

Exit mobile version