ವಿಜ್ಞಾನ ಮಾದರಿ ಸ್ಪರ್ಧೆ ಹಾಗೂ ತುಳುಸಿರಿ ಸಂಸ್ಕೃತಿ ಉತ್ಸವದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ: ಚರ್ಚ್ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಶ್ರೀಶ ಎಸ್ ಪ್ರಭು ಹಾಗೂ ಸುಚೇತ್ ಕೆ ಇವರು ಗುಂಪು ವಿಬಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ವಿಜ್ಞಾನ ಶಿಕ್ಷಕಿ ರೇಷ್ಮಾರವರು ತರಬೇತಿ ನೀಡಿರುತ್ತಾರೆ.

ತುಳುಸಿರಿ ಸಂಸ್ಕೃತಿ ಉತ್ಸವದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ:

ಶ್ರೀ ಆಲೂರು ವೆಂಕಟರಾವ್ ಭಾಷಾ ಕೌಶಲ ತರಬೇತಿ ಕೇಂದ್ರಗಳ ವತಿಯಿಂದ ತುಳು ಸಿರಿ ಶೀರ್ಷಿಕೆಯಡಿಯಲ್ಲಿ ತಾಲೂಕು ಮಟ್ಟದ ಸಂಸ್ಕೃತಿ ಉತ್ಸವ ಕಾರ್ಯಕ್ರಮವು ಸರಕಾರಿ ಪ್ರೌಢ ಶಾಲೆ ಕೊಯ್ಯೂರು ಇಲ್ಲಿ ಜರುಗಿದ್ದು, ಇದರಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಹಲವು ಪ್ರಶಸ್ತಿಗಳು ಬಂದಿರುತ್ತದೆ.

ಪ್ರಾಥಮಿಕ ಶಾಲಾ ವಿಬಾಗದಲ್ಲಿ ತುಳು ಪಾಡ್ದನ ಗಾಯನ ಸ್ಪರ್ಧೇಯಲ್ಲಿ ಸಿಂಚನಾ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತುಳು ಗಾದೆಯ ಬಗ್ಗೆ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಾಪ್ತಿ ತೃತೀಯ ಸ್ಥಾನ, ಪ್ರೌಢ ಶಾಲಾ ವಿಭಾಗದಲ್ಲಿ ತುಳು ಒಗಟು ಸ್ಪರ್ಧೆಯಲ್ಲಿ ಹಿತಾ ಮತ್ತು ಅನನ್ಯ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವೀರನಾರಿಯ ಪಾತ್ರಾಭಿನಯ ಸ್ಪರ್ಧೆಯಲ್ಲಿ ಸೃಜನ್ಯ ತೃತೀಯ ಸ್ಥಾನ ಮತ್ತು ಶಿಕ್ಷಕರಿಗೆ ಹಮ್ಮಿಕೊಂಡ ತುಳುಗಾದೆಗಳ ಬಗ್ಗೆ ಆಶುಭಾಷಣ ಸ್ಪರ್ಧೆಯಲ್ಲಿ ಶಿಕ್ಷಕಿ ಸಂಧ್ಯಾ ಎಂ ತೃತೀಯ ಸ್ಥಾನ ಪಡೆದಿದ್ದಾರೆ.

LEAVE A REPLY

Please enter your comment!
Please enter your name here