ನ.12ರಂದು ಶ್ರೀ.ಧ.ಮಂ.ಪ.ಪೂ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಸಾಹಿತ್ಯಿಕ/ಸಾಂಸ್ಕೃತಿಕ ಸ್ಪರ್ಧೆ

0

ಉಜಿರೆ: ಶ್ರೀ.ಧ.ಮಂ.ಪ.ಪೂ ಕಾಲೇಜಿನಲ್ಲಿ ನ.12ರಂದು ಪೂರ್ವಾಹ್ನ 10ರಿಂದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಸಾಹಿತ್ಯಿಕ/ಸಾಂಸ್ಕೃತಿಕ ಸ್ಪರ್ಧೆಗಳು ಜರುಗಲಿರುವುದು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ನಡೆಸಲಿದ್ದಾರೆ. ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಜಯಣ್ಣ ಸಿ.ಡಿ ವಹಿಸಲಿದ್ದಾರೆ. ಅಭ್ಯಾಗತರಾಗಿ ಶ್ರೀ ಧ ಮಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಬಿ.ಸೋಮಶೇಖರಶೆಟ್ಟಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here