Site icon Suddi Belthangady

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ತಾಲೂಕು ಪ್ರಾಥಮಿಕ ಪ್ರೌಢಶಾಲೆಗಳ ಕ್ರೀಡಾಕೂಟವು ನ.8 ಮತ್ತು 9 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆಯಲ್ಲಿ ಏರ್ಪಡಿಸಲಾಗಿತ್ತು.

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಆಲ್ಸ್ಟನ್ ಡಿಸಿಲ್ವ (7ನೇ) 400ಮೀ ಪ್ರಥಮ ಸ್ಥಾನ, 600ಮೀ ಪ್ರಥಮ ಸ್ಥಾನ, 200ಮೀ ದ್ವಿತೀಯ ಸ್ಥಾನ ಪಡೆದು ವೈಯಕ್ತಿಕ ಚಾಂಪಿಯನ್ ಪಡೆದಿರುತ್ತಾರೆ. ವಿಯೋನ ರೇಗೊ (9ನೇ) ವೇಗದ ನಡಿಗೆಯಲ್ಲಿ ದ್ವಿತೀಯ ಸ್ಥಾನ ಮತ್ತು ಪ್ರಾಥಮಿಕ ವಿಭಾಗದ ಬಾಲಕರ ರಿಲೇಯಲ್ಲಿ ಲೆವಿನ್ ಡಿಸೋಜ (8ನೇ) , ಆಶಿಶ್ (8ನೇ), ಟಿ. ಪ್ರಜ್ಞೇಶ್ (8ನೇ), ಮಹಮ್ಮದ್ ಅವೀಝ್ (8ನೇ) ಪ್ರಥಮ ಸ್ಥಾನ ಹಾಗೂ ಪ್ರೌಢ ವಿಭಾಗದ ಬಾಲಕರ ರಿಲೇಯಲ್ಲಿ ಜೋಶನ್ (10ನೇ) , ವರುಣ್ (10ನೇ) , ಧನುಷ್ (10ನೇ), ಶಾಮಿಲ್ (10ನೇ) ಇವರು ಪ್ರಥಮ ಸ್ಥಾನ ಪಡೆದು ಶಾಲೆಗೆ ಸಮಗ್ರ ಪ್ರಶಸ್ತಿಯನ್ನು ತಂದಿರುತ್ತಾರೆ ಹಾಗೂ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ದೈಹಿಕ ಶಿಕ್ಷಣ ಶಿಕ್ಷಕರಾದ  ಶರತ್ ಪಿಂಟೋ ತರಬೇತಿ ನೀಡಿರುತ್ತಾರೆ. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ಅಭಿನಂದಿಸಿದರು.

Exit mobile version