ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ರೆಡ್ ಕ್ರಾಸ್ ಘಟಕ ಉದ್ಘಾಟನೆ

0
52

ಮಡಂತ್ಯರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಹೊಸದಾಗಿ ಆರಂಭಗೊಂಡ ಪ್ರೌಢಶಾಲಾ ಹಾಗೂ ಪದವಿ ಪೂರ್ವ ವಿಭಾಗದ ಜೂನಿಯರ್ ರೆಡ್ ಕ್ರಾಸ್ ನ ಉದ್ಘಾಟನೆಯು ಇತ್ತೀಚಿಗೆ ಜರುಗಿತು. ಮಂಗಳೂರು ಕಿಟಲ್ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಠಲ.ಎ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಘಟಕವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳು ಸ್ವಾವಲಂಬಿ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಪರೋಪಕಾರ, ಸೌಹಾರ್ದ ಯುತ ಜೀವನ, ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ. ಮಾನವೀಯ ಮೌಲ್ಯಗಳು ಇಂದಿನ ಸಮಾಜಕ್ಕೆ ಅಗತ್ಯವಿದೆ .ಜಾತಿ-ಧರ್ಮ ತಾರತಮ್ಯಗಳಿಲ್ಲದೆ ಪರಸ್ಪರ ಗೌರವಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕೆಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ವಂ|ಜೆರೊಮ್ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮೋಹನ್ ನಾಯಕ್, ಪ್ರೌಢಶಾಲಾ ವಿಭಾಗದ ರೆಡ್ ಕ್ರಾಸ್ ಘಟಕದ ನಿರ್ದೇಶಕ ಜಯರಾಮ್ ಉಪಸ್ಥಿತರಿದ್ದರು.ಪದವಿ ಪೂರ್ವ ವಿಭಾಗದ ರೆಡ್ ಕ್ರಾಸ್ ಘಟಕದ ನಿರ್ದೇಶಕರಾದ ಲಿಯೋ ನರೊನ್ಹಾ ಸ್ವಾಗತಿಸಿದರು. ಉಪನ್ಯಾಸಕರಾದ ಗ್ರೇಸ್ ಲೀನಾ ಡಿಸೋಜ ವಂದಿಸಿದರು, ಹೇಮಲತಾ ಎಂ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಪ್ರಯುಕ್ತ ಪ್ರಥಮ ಚಿಕಿತ್ಸಾ ಮಾಹಿತಿ ಕಾರ್ಯಕ್ರಮ ನಡೆಯಿತು. ಡಾ| ಜೆ.ಆರ್.ಸೇರಾ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here