Site icon Suddi Belthangady

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆ

ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯು ನ.15ರಂದು ಗ್ರಾಮ ಪಂಚಾಯತ್ ಸಭಾ ಭವನ ಮದ್ದಡ್ಕದಲ್ಲಿ ಜರಗಿತು .

ಗ್ರಾಮ ಪಂಚಾಯತ್ ಅಧ್ಯಕ್ಷೆ  ಆಶಾಲತಾ ವಹಿಸಿದ್ದರು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಸಾಮಾಜಿಕ ವಲಯರಣ್ಯ ಅಧಿಕಾರಿ ಕು. ವಿದ್ಯಾ ರವರು ಭಾಗವಹಿಸಿ ಗ್ರಾಮ ಸಭೆ ಯಾನ್ನು ನಡೆಸಿಕೊಟ್ಟರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ  ಗೀತಾ ಸ್ವಾಗತಿಸಿ ವರದಿ ಮಂಡಿಸಿದರು. ವಾರ್ಡ್ ಸಭೆಗಳ ವರದಿ ಹಾಗು ನಡಾವಳಿ ಗಳನ್ನು ಓದಿ ಹೇಳಿದರು. ಕಾರ್ಯದರ್ಶಿ ಶ್ರೀಮತಿ ಸೇವಂತಿ ಜಮಾ ಖರ್ಚಿನ ವಿವರ ನೀಡಿದರು. ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಪ್ರದೀಪ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರು,ಇಲಾಖಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಉಪಸ್ಥಿತರಿದ್ದರು. ಸಿಬಂದಿ ಆನಂದ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Exit mobile version