ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನ ಮತ್ತು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಯೋಜನೆ: ರೂ.26 ಕೋಟಿ ವೆಚ್ಚದ ಕಾಮಗಾರಿಗೆ ಶಿಲಾನ್ಯಾಸ: ರಾಜ್ಯ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ ಶಿಲಾನ್ಯಾಸ

0

ಧರ್ಮಸ್ಥಳ: ಗ್ರಾ.ಪಂ ಧರ್ಮಸ್ಥಳ ಹಾಗೂ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನ ಮತ್ತು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಒದಗಿಸುವ ರೂ.26 ಕೋಟಿ ವೆಚ್ಚದ ಯೋಜನೆ ಕಾಮಗಾರಿಯ ಶಿಲಾನ್ಯಾಸ ಸಮಾರಂಭ ನ.21 ರಂದು ಶಿವರಾತ್ರಿ ಗುಡ್ಡೆ ಧರ್ಮಸ್ಥಳದಲ್ಲಿ ಜರುಗಿತು.

ಶಿಲಾನ್ಯಾಸವನ್ನು ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜ ನೆರವೇರಿಸಿದರು.

ರಾಜ್ಯ ಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮದರ್ಶಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಆಶೀರ್ವಾದ ಮಾಡಿದರು.  ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ನಗರಾಭಿವೃದ್ದಿ ಇಲಾಖೆ ಅಧ್ಯಕ್ಷತ ಹಾಗೂ ಶಾಸಕ ನರಸಿಂಹ ನಾಯಕ್ ರಾಜು ಗೌಡ, ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ  ಡಾ. ಕುಮಾರ್ , ಕಿಯೋನಿಕ್ಸ್ ಅಧ್ಯಕ್ಷ ಹರೀಕೃಷ್ಣ ಬಂಟ್ವಾಳ, ಎಸ್.ಡಿಎಂ ಶಿಕ್ಷನ ಸಂಸ್ಥೆಯ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್, ಧರ್ಮಸ್ಥಳದ ಡಿ  ಸುರೇಂದ್ರ ಕುಮಾರ್, ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷೆ ಜಯ ಮೋನಪ್ಪ ಗೌಡ, ಉಪಾಧ್ಯಕ್ಷ ಶ್ರೀನಿವಾಸ ರಾವ್, ಹೆಗ್ಗಡೆಯವರ ಆಪ್ತ ಸಹಾಯಕ ವೀರೂ ಶೆಟ್ಟಿ, ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್ , ನಗರಾಭಿವೃದ್ದಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here