Site icon Suddi Belthangady

ಎಸ್‌ಡಿಎಂ’ನಲ್ಲಿ ರಾಜ್ಯ ಶಾಸ್ತ್ರ ವಿಭಾಗದಿಂದ ಅತಿಥಿ ಉಪನ್ಯಾಸ ಕಾರ್ಯಕ್ರಮ

ಉಜಿರೆ:  ಇಂಗ್ಲಿಷ್ ಭಾಷಾ ಕೌಶಲ್ಯ ಮತ್ತು ಕಂಪ್ಯೂಟರ್ ಜ್ಞಾನವಿದ್ದರೆ ಗ್ರಾಮೀಣ ವಿಧ್ಯಾರ್ಥಿಗಳಿಗೆ ಕೂಡ ಉತ್ತಮ ಭವಿಷ್ಯವಿದೆ ಎಂದು ಬೆಂಗಳೂರು ಸೆಂಟ್ ಜೋಸೆಫ್ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸೋಮಯ್ಯ ಹೇಳಿದರು.

ಉಜಿರೆ ಎಸ್‌ಡಿಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗವು ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಏನೆಲ್ಲಾ ಅವಕಾಶಗಳು ಇದ್ದಾವೆ ಮತ್ತು ಅವುಗಳನ್ನು ಹೇಗೆ ಸದುಪಯೋಗ ಪಡಿಸಿಕೊಳ್ಳಬಹುದು ಎಂಬ ಬಗ್ಗೆ ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಶಲೀಫ್ , ಉಪನ್ಯಾಸಕರು ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು. ವಿಧ್ಯಾರ್ಥಿನಿ ವಸುಂಧರ ನಿರೂಪಣೆ ಮಾಡಿದರು. ತೃಪ್ತಿ ದಿನೇಶ್ ಸ್ವಾಗತಿಸಿ, ಶ್ರವಣ್ ಕುಮಾರ್ ವಂದಿಸಿದರು.

Exit mobile version