ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸಂಘೋತ್ಸವ

0

ಬೆಳ್ತಂಗಡಿ:ಸ್ವ-ಸಹಾಯ ಸಂಘಗಳು ಮಹಿಳೆಯರ ಬಲವರ್ಧನೆಗೆ ಪೂರಕ ಶಕ್ತಿಯಾಗಿ ರೂಪುಗೊಂಡು, ತನ್ಮೂಲಕ ಸಾಮಾಜಿಕ ಅಭಿವೃದ್ಧಿಗೆ ನಾಂದಿ ಹಾಡಲು ಸಾಧ್ಯ. ಕಳೆದ 39 ವರ್ಷಗಳ ಸಾರ್ಥಕ ಸೇವೆಯ ಅವಧಿಯಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕೆಲಸ ಕಾರ್ಯಗಳನ್ನು ಜನರು ತಮ್ಮದಾಗಿಸಿಕೊಂಡಿದ್ದಾರೆ ಎಂದು ಬೆಳ್ತಂಗಡಿ ಸಂತ ಲಾರೆನ್ಸ್ ಪ್ರಧಾನ ದೇವಾಲಯದ ಧರ್ಮಗುರುಗಳಾದ ವಂದನೀಯ ಫಾ. ತೋಮಸ್ ಕಣ್ಣಾಂಗಾಲ್ ಅಭಿಪ್ರಾಯಪಟ್ಟರು. ಅವರು ನ. 21 ರಂದು ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ ಹಾಗೂ ಅರುಣೋದಯ ಮಹಾಸಂಘ ಬೆಳ್ತಂಗಡಿ ಇವುಗಳ ಸಹಭಾಗಿತ್ವದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಕೇಂದ್ರವಾದ ಜ್ಞಾನ ನಿಲಯದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯು ಆಯೋಜಿಸಿದ ‘ಸಂಘೋತ್ಸವ- 2022 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ರವರು ಪ್ರಾಸ್ತಾವನೆಗೈದು ಸಂಘೋತ್ಸವ ಕಾರ್ಯಕ್ರಮ ಆಯೋಜನೆ ಮಾಡಿದ ಉದ್ದೇಶದ ಬಗ್ಗೆ ವಿವರಿಸಿದರು.

ಉದ್ಘಾಟನಾ ಕಾರ್ಯಕ್ರಮದ ನಂತರ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಹೊರಾಂಗಣ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ಅತಿಥಿ ಅಭ್ಯಾಗತರು ಬಹುಮಾನ ವಿತರಿಸಿದರು. ಬೆಳ್ತಂಗಡಿ ಜ್ಞಾನ ನಿಲಯದ ನಿರ್ದೇಶಕರಾದ ವಂದನೀಯ ಫಾದರ್ ಜೋಸೆಫ್ ಮಟ್ಟಮ್ ಕಾರ್ಯಕ್ರಮಕ್ಕೆ ಶುಭ ಕೋರಿದರು. ಅರುಣೋದಯ ಮಹಾ ಸಂಘದ ಅಧ್ಯಕ್ಷರಾದ ಶ್ರೀಮತಿ ಏಲಿಯಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಇದರ ಅಧ್ಯಕ್ಷರಾದ ಶ್ರೀಮತಿ ಏಲಿಯಮ್ಮ ತೋಮಸ್, ಸ್ನೇಹ ಕಿರಣ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಜೋನ್ ಹಾಗೂ ಒಕ್ಕೂಟದ ಪದಾಧಿಕಾರಿಯಾದ ಶ್ರೀಮತಿ ಲಲಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಡಿ.ಕೆ.ಆರ್.ಡಿ ಎಸ್ ಸಂಸ್ಥೆಯ ಮಹಿಳಾ ಸಬಲೀಕರಣ ಯೋಜನೆಯ ಸಂಯೋಜಕಿಯಾದ ಶ್ರೀಮತಿ ಸಿಸಿಲಿಯಾ ತಾವ್ರೋ ಕಾರ್ಯಕ್ರಮ ನಿರೂಪಿಸಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕರಾದ  ಸುನಿಲ್ ಗೊನ್ಸಾಲ್ವಿಸ್ ಹಾಗೂ ಕಾರ್ಯಕರ್ತರಾದ  ಮಾರ್ಕ್ ಡಿ’ ಸೋಜಾ, ಮಂಗಳೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿದ್ಯಾರ್ಥಿ ಕುಮಾರಿ ಪ್ರಕೃತಿ ಸಿ.ವಿ., ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿದ್ಯಾರ್ಥಿಗಳಾದ ಕುಮಾರಿ ಜಯಶ್ರೀ,  ಪ್ರಣಿತ್ ಹಾಗೂ ಅಭಿಶ್ ಸ್ವಯಂ ಸೇವಕರಾಗಿ ದುಡಿದು ಈ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

LEAVE A REPLY

Please enter your comment!
Please enter your name here