ಜಿಲ್ಲಾ ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಮಚ್ಚಿನ: ಮಂಗಳೂರು ಅತ್ತಾವರ ಸರಕಾರಿ ಪ್ರೌಢಶಾಲೆ ಇದರ ನೇತೃತ್ವದಲ್ಲಿ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿಯ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮಾಡಿದ್ದಾರೆ.

ಪುನಿತ್ ಕುಮಾರ್ 3000 ಮೀ ಓಟದಲ್ಲಿ ಪ್ರಥಮ , ಧನ್ಯಾ 3000 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅಖಿಲೇಶ್ 5 ಕಿ.ಮೀ. ನಡಿಗೆಯಲ್ಲಿ ತೃತೀಯ ಸ್ಥಾನ ಹಾಗೂ ಸುಹೈಲ್ ಅಹಮ್ಮದ್ ಜಾವಲಿನ್ ಎಸೆತದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಇವರು ಶಾಲೆಗೆ ಮತ್ತು ಹೆತ್ತವರಿಗೆ ಕೀರ್ತಿಯನ್ನು ತಂದಿದ್ದಾರೆ.

ಇವರಿಗೆ ಶಿಕ್ಷಕರಾದ ಸುಭಾಶ್ಚಂದ್ರ ಪೂಜಾರಿ ಮತ್ತು ಸಹ ಶಿಕ್ಷಕವೃಂದದವರು ತರಬೇತಿಗೊಳಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.